Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ

ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ

ಸುದ್ದಿಕಿರಣ ವರದಿ
ಶನಿವಾರ, ಜನವರಿ 1, 2022

ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ

ಉಡುಪಿ: ದೊಡ್ಡಣಗುಡ್ಡೆ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಶನಿವಾರ 29ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ಆರಂಭಗೊಂಡಿತು.

ಭಾರತೀಯ ಮನೋವೈದ್ಯಕೀಯ ಕರ್ನಾಟಕ ಶಾಖೆ ಅಧ್ಯಕ್ಷ ಡಾ. ಕಿರಣ್ ಕುಮಾರ್ ಪಿ. ಕೆ. ಶಿಬಿರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, 29ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ನಡೆಸುತ್ತಿರುವುದು ಅಚ್ಚರಿಯ ಸಂಗತಿ. ಕಾರಣ, ಮದ್ಯವ್ಯಸನ ವಿಮುಕ್ತಿ ಶಿಬಿರ ನಡೆಸುವುದು ಸುಲಭದ ಮಾತಲ್ಲ. 1,800ಕ್ಕೂ ಅಧಿಕ ಮದ್ಯ ವ್ಯಸನಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಇಡೀ ರಾಜ್ಯಕ್ಕೇ ಈ ಆಸ್ಪತ್ರೆ ಮಾದರಿ ಎಂದರು.

ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ರೋಟರಿ ಕ್ಲಬ್ ಉಡುಪಿ- ಮಣಿಪಾಲ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ ಮತ್ತು ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆ ಸಹಭಾಗಿತ್ವದಲ್ಲಿ ಶಿಬಿರ ಆಯೋಜಿಸಲಾಗಿತ್ತು.

ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ, ಖ್ಯಾತ ಮನೋವೈದ್ಯ ಡಾ. ಪಿ. ವಿ. ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.

ಮಣಿಪಾಲ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ ಎಂ., ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ. ಕಲ್ಯ ವಿನಾಯಕ ಶೆಣೈ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಹೇಮಂತ್, ಮನೋವೈದ್ಯ ವಿರೂಪಾಕ್ಷ ದೇವರಮನೆ, ಆಪ್ತ ಸಮಾಲೋಚಕ ಗಿರೀಶ್ ಎಂ.ಎನ್. ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!