Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಮಳೆಹಾನಿ: 500 ಕೋ. ಬಿಡುಗಡೆ

ಮಳೆಹಾನಿ: 500 ಕೋ. ಬಿಡುಗಡೆ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15

ಮಳೆಹಾನಿ: 500 ಕೋ. ಬಿಡುಗಡೆ
ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಂಡ ಮೂಲಭೂತ ಸೌಕರ್ಯ ಮರುಸ್ಥಾಪನೆ ಕಾಮಗಾರಿಗೆ 500 ಕೋಟಿ ರೂ. ಬಿಡುಗಡೆಗೊಳಿಸಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ನಡಸಿದ ವೀಡಿಯೊ ಕಾನ್ಫರೆನ್ಸ್ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಅದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ಕಟ್ಟಡ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೊಳಗಾಗಿವೆ.

ಈ ಹಾನಿಯನ್ನು ಜಿಲ್ಲಾಧಿಕಾರಿಗಳು ವರದಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ನಾನು ಕೆಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೆ. ಆ ಸಂದರ್ಭದಲ್ಲಿ ಹಾನಿಯನ್ನು ನಾನು ಸ್ವತಃ ವೀಕ್ಷಣೆ ಮಾಡಿದ್ದೇನೆ. ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ.

ಅದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ. ಅದಕ್ಕಾಗಿ ಕೂಡಲೇ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಆದೇಶ ನೀಡಿರುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!