Monday, July 4, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಮಳೆ ಹಾನಿಗೆ ಕೇಂದ್ರದಿಂದ ಪರಿಹಾರ ಬಿಡುಗಡೆ

ಮಳೆ ಹಾನಿಗೆ ಕೇಂದ್ರದಿಂದ ಪರಿಹಾರ ಬಿಡುಗಡೆ

ನವದೆಹಲಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕಳೆದ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಹಣ ಪರಿಹಾರ ಹಣ ಬಿಡುಗಡೆ ಮಾಡಿದೆ.

ರಾಜ್ಯಕ್ಕೆ 629.03 ಕೋ. ರೂ. ಹಾಗೂ ಮಹಾರಾಷ್ಟ್ರಕ್ಕೆ 701 ಕೋ. ರೂ. ನೆರವಿನ ಅನುಮೋದನೆಯನ್ನು ಎಸ್.ಡಿ.ಆರ್.ಎಫ್ ಮಾನದಂಡಗಳಡಿ ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಯಲ್ಲಿ ನಡೆದ ಪ್ರಶ್ನೆಗೆ ಉತ್ತರಿಸಿದರು.

ಅನಾವೃಷ್ಟಿ ಕಾರಣದಿಂದ 2020ನೇ ಸಾಲಿನಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರ್ಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ 113.69 ಕೋ. ರೂ. ಎಸ್.ಡಿ.ಆರ್.ಎಫ್ ಮಾನದಂಡಗಳಡಿ ಅನುಮೋದನೆ ನೀಡಿದೆ.

2020- 21ನೇ ವರ್ಷದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿ ಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೊಳಪಡಿಸಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು 750.12 ಕೋ. ರೂ. ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಲಾಭ ಪಡೆದಿರುವುದಾಗಿ ಸಚಿವೆ ಶೋಭಾ ತಿಳಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!