Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಜುಲೈ 12, 13: ಮಳೆ ಹಾನಿ ವೀಕ್ಷಣೆಗೆ ಕರಾವಳಿ ಜಿಲ್ಲೆಗಳಿಗೆ ಸಿಎಂ

ಜುಲೈ 12, 13: ಮಳೆ ಹಾನಿ ವೀಕ್ಷಣೆಗೆ ಕರಾವಳಿ ಜಿಲ್ಲೆಗಳಿಗೆ ಸಿಎಂ

ಸುದ್ದಿಕಿರಣ ವರದಿ
ಸೋಮವಾರ, ಜುಲೈ 11

ಜುಲೈ 12, 13: ಮಳೆ ಹಾನಿ ವೀಕ್ಷಣೆಗೆ ಕರಾವಳಿ ಜಿಲ್ಲೆಗಳಿಗೆ ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಂಗಳವಾರದಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜುಲೈ 12ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ರಾತ್ರಿ ಉಡುಪಿಗಾಗಮಿಸಿ ರಾತ್ರಿ ವಾಸ್ತವ್ಯ ಹೂಡುವರು.

ಮರುದಿನ ಬೆಳಿಗ್ಗೆ ಉಡುಪಿ ಮತ್ತು ದ.ಕ. ಜಿಲ್ಲೆಗಳ ಮಳೆ ಹಾನಿಗೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸುವರು.

ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಆ ಜಿಲ್ಲೆಯ ಮಳೆ ಹಾನಿ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ಅಪರಾಹ್ನ 2.45ಕ್ಕೆ ಉಡುಪಿ ಜಿಲ್ಲೆಗಾಗಮಿಸಿ, ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು. ರಾತ್ರಿ 7.30 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತೆರಳುವರು.

ಪ್ರವಾಸ ಸಂದರ್ಭದಲ್ಲಿ ಕೊಡಗಿನಲ್ಲಿ ಮಳೆ ಹಾನಿ, ಭೂಕುಸಿತ ಸ್ಥಳ ಪರಿಶೀಲನೆ, ಸಂತ್ರಸ್ತರೊಂದಿಗೆ ಮಾತನಾಡಿ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಜೊತೆಗೆ ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಆಗಮಿಸುವರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!