ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿ ಸಭೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮುಂದಿನ ಕಾರ್ಯಯೋಜನೆ ಮತ್ತು ಪ್ರತೀ ಬೂತ್ ಗಳಲ್ಲಿ ಐದು ಮಂದಿ ಮಹಿಳಾ ಕಾರ್ಯಕರ್ತೆಯರನ್ನು ನೇಮಿಸುವಂತೆ ಮಾಹಿತಿ ನೀಡಿದರು.
ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್ ಹೇರೂರು, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ವಸಂತಿ ಸತೀಶ್ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಪೂಜಾರಿ ಮತ್ತು ಸುಮತಿ ಪೂಜಾರಿ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸರ್ವ ಸದಸ್ಯರು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಇದ್ದರು