ಉಡುಪಿ ನಗರ ಬಿಜೆಪಿ: ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ
(ಸುದ್ದಿಕಿರಣ ವರದಿ)
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮಹಿಳಾ ಮೋರ್ಚಾದ ದ್ವಿತೀಯ ಕಾರ್ಯಕಾರಿಣಿ ಸಭೆ ಉಪಾಧ್ಯಕ್ಷೆ ಸರೋಜಾ ಶೆಣೈ ಅಧ್ಯಕ್ಷತೆಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಮಾರ್ಗದರ್ಶನದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪಕ್ಷ ಸಂಘಟನೆ ಬಗ್ಗೆ ಮಾತನಾಡಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ, ಪ್ರಭಾರಿ ರಜನಿ ಹೆಬ್ಬಾರ್, ನಗರ ಬಿಜೆಪಿ ಉಪಾಧ್ಯಕ್ಷೆ ಪ್ರಭಾ ಶೆಟ್ಟಿ, ಕಾರ್ಯದರ್ಶಿಗಳಾದ ದಯಾಶಿನಿ ಪಂದುಬೆಟ್ಟು, ಲಕ್ಷ್ಮೀ ಕಿನ್ನಿಮುಲ್ಕಿ, ನಗರ ಮಹಿಳಾ ಮೋರ್ಚಾ ಉಪಾಧ್ಯಕ್ಷೆಯರಾದ ಪ್ರತಿಮಾ ನಾಯಕ್ ಮತ್ತು ಜಯಲಕ್ಷ್ಮೀ ಎ. ಶೆಟ್ಟಿಗಾರ್, ಕಾರ್ಯದರ್ಶಿ ಲೈಲಾ ಪ್ರಭಾವತಿ ಮೊದಲಾದವರಿದ್ದರು.
ಸಮಾರೋಪ ಸಮಾರಂಭದಲ್ಲಿ ನಗರ ಬಿಜೆಪಿ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್ ಪ್ರಮುಖ ಭಾಷಣ ಮಾಡಿದರು.
ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಜಲ ಸತೀಶ್ ಸುವರ್ಣ ಸ್ವಾಗತಿಸಿ, ಸುಧಾ ಎಸ್. ಪೈ ನಿರೂಪಿಸಿದರು. ಉಪಾಧ್ಯಕ್ಷೆ ಶೈಲಜಾ ಕುಂದರ್ ವಂದಿಸಿದರು