Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾ ಪಾತ್ರ

ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾ ಪಾತ್ರ

ಉಡುಪಿ: ಮಹಿಳೆಯರು ಇಂದು ಸ್ವಾವಲಂಬನೆ ಮತ್ತು ಆತ್ಮವಿಶ್ವಾಸದೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಮಹಿಳಾ ಸಬಲೀಕರಣದತ್ತ ಬಿಜೆಪಿ ಮಹಿಳಾ ಮೋರ್ಚಾದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಹೇಳಿದರು.

ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ, ನಿಗಮದಿಂದ ಮಹಿಳಾ ಅಭಿವೃದ್ಧಿ ಬಗ್ಗೆ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿ ನೀಡಿದರು.

ಸ್ವಸಹಾಯ ಸಂಘಗಳ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಸಂಬಂಧಪಟ್ಟಂತೆ ಹಾಗೂ ಮಹಿಳೆಯರು ಒಂದಾಗಿ ಪ್ರಾರಂಭಿಸುವ ಉತ್ಪಾದನಾ ಘಟಕಗಳಿಗೆ ರಿಯಾಯತಿ ದರದ ಸಾಲ ಸೌಲಭ್ಯದ ಜೊತೆಗೆ ಸುಕನ್ಯಾ ಸಮೃದ್ಧಿ ಯೋಜನೆಯಡಿ ಬಿಪಿಎಲ್ ಕಾರ್ಡು ಹೊಂದಿರುವ ಬೀದಿ ಬದಿ ಸಣ್ಣ ವ್ಯಾಪಾರಸ್ಥ ಮಹಿಳೆಯರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ಮುಂತಾದ ಯೋಜನೆ ಚಾಲ್ತಿಯಲ್ಲಿವೆ. ಮಹಿಳಾ ಮೋರ್ಚಾದ ಎಲ್ಲಾ ಸ್ತರದ ಪದಾಧಿಕಾರಿಗಳು ಹಾಗೂ ಸದಸ್ಯರು ಪಕ್ಷ ಸಂಘಟನೆ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಹಕರಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅವರು ಶಶಿಕಲಾ ವಿ. ಟೆಂಗಳಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷೆ ಸುಮಾ ಶೆಟ್ಟಿ, ಉಡುಪಿ ನಗರ ಉಪಾಧ್ಯಕ್ಷೆ ರಶ್ಮಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಸುಜಾಲ ಮತ್ತು ಸುಧಾ ಪೈ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಮಾಯಾ ಕಾಮತ್, ರಮಾ ವೈ. ಶೆಟ್ಟಿ, ಪೂರ್ಣಿಮಾ ರತ್ನಾಕರ್, ದಯಾಶಿನಿ, ಶೋಭಾ, ಸರೋಜಾ, ಸುಬೇಧಾ, ಲೈಲಾ, ಆಶಾ, ಲೀಲಾ ಆರ್. ಅಮೀನ್, ಭಾರತಿ ಚಂದ್ರಶೇಖರ್, ವಿದ್ಯಾ, ಅಶ್ವಿನಿ ಶೆಟ್ಟಿ, ಶಶಿಕಲಾ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!