Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಸ್ವಾತಂತ್ರ್ಯ ಅಮೃತ ಮಹೋತ್ಸವ: ಮಹಿಳೆಯರಿಂದ ವಾಹನ ಜಾಥಾ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಮಹಿಳೆಯರಿಂದ ವಾಹನ ಜಾಥಾ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಮಹಿಳೆಯರಿಂದ ವಾಹನ ಜಾಥಾ

(ಸುದ್ದಿಕಿರಣ ವರದಿ)
ಉಡುಪಿ: ದೇಶದ ಸ್ವಾತಂತ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಆಶ್ರಯದಲ್ಲಿ ಮಹಿಳೆಯರಿಂದ 75 ವಾಹನಗಳ ಜಾಥಾ ಮತ್ತು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಆ. 15ರ ರವಿವಾರ ಬೆಳಿಗ್ಗೆ ಗಂಟೆ 8.30ಕ್ಕೆ ರಾಷ್ಟ್ರ ಧ್ವಜದೊಂದಿಗೆ 75 ವಾಹನಗಳ ಜಾಥಾ ನಡೆಯಲಿದೆ.

ಬನ್ನಂಜೆ ಶ್ರೀ ನಾರಾಯಣ ಗುರು ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಾಹನ ಜಾಥಾಕ್ಕೆ ಶಂಖ ನಾದದೊಂದಿಗೆ ಚಾಲನೆ ನೀಡಲಿದ್ದಾರೆ.

ಬನ್ನಂಜೆಯಿಂದ ಹೊರಟ ಜಾಥಾ ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿ ಬಳಿ ಸಮಾಪನಗೊಳ್ಳಲಿದೆ.

ಬಳಿಕ 9 ಗಂಟೆಗೆ ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿ ವಠಾರದಲ್ಲಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಹೂಗಳಿಂದ ಭಾರತದ ಭೂಪಟ ರಚಿಸಿ, ಏಕಕಾಲದಲ್ಲಿ 75 ಹಣತೆಗಳಲ್ಲಿ ದೀಪ ಪ್ರಜ್ವಲನ ಮಾಡಲಾಗುವುದು.

ಸಂಭ್ರಮದ ಕ್ಷಣಗಳಲ್ಲಿ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು, ಸಮಿತಿ ಸದಸ್ಯರು, ಕಾರ್ಯಕಾರಿಣಿ ಸದಸ್ಯರು ಕೇಸರಿ ಬಿಳಿ ಹಸಿರು ಬಣ್ಣದ ಉಡುಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ಭಾರತ ಮಾತೆಗೆ ಗೌರವ ಅರ್ಪಿಸುವ ಮೂಲಕ ದೇಶದ ಸ್ವಾತಂತ್ರ್ಯವನ್ನು ಸಂಭ್ರಮಿಸುವ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಮತ್ತು ಪ್ರಮೀಳಾ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!