Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮುಖ್ಯಮಂತ್ರಿ ಕೃಷ್ಣಮಠ ಭೇಟಿ

ಮುಖ್ಯಮಂತ್ರಿ ಕೃಷ್ಣಮಠ ಭೇಟಿ

ಮುಖ್ಯಮಂತ್ರಿ ಕೃಷ್ಣಮಠ ಭೇಟಿ

(ಸುದ್ದಿಕಿರಣ ವರದಿ)
ಉಡುಪಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿಗಾಗಮಿಸಿದ ಬಸವರಾಜ ಬೊಮ್ಮಾಯಿ ಗುರುವಾರ ಇಲ್ಲಿನ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಕನಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣ ದರುಶನ ಮಾಡಿಸಿದರು.

ಬಳಿಕ ರಾಜಾಂಗಣ ನರಹರಿತೀರ್ಥ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಶ್ರೀಪಾದರು ಗೌರವಿಸಿ, ಮಂತ್ರಾಕ್ಷತೆ ನೀಡಿ ಹರಸಿದರು.

ಬೊಮ್ಮಾಯಿ ಅವಧಿಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಶ್ರೀಗಳು ಆಶೀರ್ವಚನ ನೀಡಿದರು.

ಉಡುಪಿಗೂ ನನಗೂ ಯಾವುದೇ ಸಂಬಂಧವಿಲ್ಲದಿದ್ದರೂ ಈ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಶ್ರೀಕೃಷ್ಣನ ದಯೆಯಿಂದ ನಾನು ರಾಜ್ಯದ ಮುಖ್ಯಮಂತ್ರಿಯಾದೆ ಎಂದು ವಿನೀತರಾಗಿ ಸಿಎಂ ಬೊಮ್ಮಾಯಿ ನುಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶ್ರೀಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ. ಶ್ರೀಶ ಭಟ್ ಕಡೆಕಾರು, ಶ್ರೀಕೃಷ್ಣ ಸೇವಾ ಸಮಿತಿ ಪದಾಧಿಕಾರಿಗಳು ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!