Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ರಾಜ್ಯಸಭೆಗೆ ಡಾl ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಹರ್ಷ

ರಾಜ್ಯಸಭೆಗೆ ಡಾl ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಹರ್ಷ

ಸುದ್ದಿಕಿರಣ ವರದಿ
ಬುಧವಾರ, ಜುಲೈ 6

ರಾಜ್ಯಸಭೆಗೆ ಡಾl ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಹರ್ಷ
ಬೆಂಗಳೂರು: ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿಎಂ ಬೊಮ್ಮಾಯಿ, ಡಾl ಹೆಗ್ಗಡೆ ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರ ಹಾಗೂ ಆಯಾಮಗಳಲ್ಲಿ ಜನ ಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿರುವವರು.

ಡಾl ಹೆಗ್ಗಡೆಯವರ ಅನುಭವ ಸಂಸತ್ತಿನ ಕಲಾಪಗಳ ಸತ್ವ ಹೆಚ್ಚಿಸಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಗೆ ನಾಮನಿರ್ದೇಶನಕ್ಕೆ ಡಾl ವೀರೇಂದ್ರ ಹೆಗ್ಗಡೆಯವರಂಥ ಅರ್ಹರನ್ನು ಶಿಫಾರಸು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದ್ದಾರೆ.

ಅವರೊಂದಿಗೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಒಲಿಂಪಿಯನ್ ಅಥ್ಲೀಟ್ ಆಗಿದ್ದ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಖ್ಯಾತ ಚಿತ್ರ ನಿರ್ದೇಶಕ, ಚಿತ್ರ ಸಾಹಿತಿ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನೂ ಮುಖ್ಯಮಂತ್ರಿ ಬೊಮ್ಮಾಯಿ ಅಭಿನಂದಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!