Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಕೃಷ್ಣಮಠಕ್ಕೆ ಮುಳಬಾಗಿಲು ಶ್ರೀ ಭೇಟಿ

ಕೃಷ್ಣಮಠಕ್ಕೆ ಮುಳಬಾಗಿಲು ಶ್ರೀ ಭೇಟಿ

ಸುದ್ದಿಕಿರಣ ವರದಿ
ಗುರುವಾರ, ಜನವರಿ 6, 2022

ಕೃಷ್ಣಮಠಕ್ಕೆ ಮುಳಬಾಗಿಲು ಶ್ರೀ ಭೇಟಿ
ಉಡುಪಿ: ಮುಳಬಾಗಿಲು ಶ್ರೀಪಾದರಾಜ ಮಠದ ಶ್ರೀ ಸುಜಯನಿಧಿತೀರ್ಥ ಶ್ರೀಪಾದರು ಗುರುವಾರ ಇಲ್ಲಿನ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

ಶ್ರೀಗಳನ್ನು ಮಠೀಯ ಸಂಪ್ರದಾಯದಂತೆ ಬಿರುದಾವಳಿ, ವೇದಘೋಷ, ವಾದ್ಯಗಳೊಂದಿಗೆ ಬರಮಾಡಿಕೊಳ್ಳಲಾಯಿತು.

ಶ್ರೀಕೃಷ್ಣ ಮಠದ ಮಹಾದ್ವಾರದಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮುಳಬಾಗಿಲು ಶ್ರೀಪಾದರನ್ನು ಬರಮಾಡಿಕೊಂಡರು.

ಕನಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಮಾಡಿಸಿ, ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿದರು.

ಪರ್ಯಾಯ ಅದಮಾರು ಶ್ರೀಕೃಷ್ಣ ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!