Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಮುಂದುವರಿದ ಹೋರಾಟ

ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಮುಂದುವರಿದ ಹೋರಾಟ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹೋರಾಟ ಮುಂದುವರಿದಿದೆ.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗ, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆಮ್ಮಾಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ, ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ತಮ್ಮ ಆಂದೋಲನಕ್ಕೆ ಅವರ ಬೆಂಬಲಿಗರೊಂದಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರೆಲ್ಲರೂ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಜಿಲ್ಲಾ ಮುಖಂಡರಾದ ನವಾಝ್ ಶೇಕ್, ಉಡುಪಿ ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯ ಸಹದ್ ಬಸ್ರೂರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!