Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಪ್ರಧಾನಿ ಮೋದಿ ದೀರ್ಘಾಯುಷ್ಯ ಹಾರೈಸಿ ವಿಶೇಷ ಪೂಜೆ

ಪ್ರಧಾನಿ ಮೋದಿ ದೀರ್ಘಾಯುಷ್ಯ ಹಾರೈಸಿ ವಿಶೇಷ ಪೂಜೆ

ಸುದ್ದಿಕಿರಣ ವರದಿ
ಶುಕ್ರವಾರ, ಜನವರಿ 7, 2022

ಪ್ರಧಾನಿ ಮೋದಿ ದೀರ್ಘಾಯುಷ್ಯ ಹಾರೈಸಿ ವಿಶೇಷ ಪೂಜೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀರ್ಘಾಯುಷ್ಯ ಹಾರೈಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ವೀಣಾ ಶೆಟ್ಟಿ ನೇತೃತ್ವದಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಮೃತ್ಯುಂಜಯ ಜಪ ಹಾಗೂ ವಿಶೇಷ ಪೂಜೆ ನಡೆಸಲಾಯಿತು.

ಕಳೆದ ಜ. 5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮ ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆ ನೆರವೇರಿಸುತ್ತಿರುವುದಾಗಿ ವೀಣಾ ಶೆಟ್ಟಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಎ. ಸುವರ್ಣ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ರಾಮ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯೆಯರಾದ ರಜನಿ ಹೆಬ್ಬಾರ್, ಸವಿತಾ ಹರೀಶ್ ರಾಮ್ ಮತ್ತು ರಶ್ಮಿ ಭಟ್, ಜಿಲ್ಲಾ ಮತ್ತು ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಅಶ್ವಿನಿ ಶೆಟ್ಟಿ, ಪೂರ್ಣಿಮಾ ರತ್ನಾಕರ್, ಸುಧಾ ಪೈ, ಸರೋಜಾ ಶೆಣೈ, ಕಾವೇರಿ, ಉಜ್ವಲ, ಲೈಲಾ, ಪ್ರತಿಮಾ ನಾಯಕ್, ಪ್ರೀತಿ ಮುಂತಾದವರಿದ್ದರು.

ಜಿಲ್ಲೆಯ 6 ಮಂಡಲಗಳಲ್ಲೂ ವಿಶೇಷ ಪೂಜೆ ನಡೆಸಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!