ಸುದ್ದಿಕಿರಣ ವರದಿ
ಶುಕ್ರವಾರ, ಜನವರಿ 28
ಯಡಿಯೂರಪ್ಪ ಮೊಮ್ಮಗಳು ನೇಣಿಗೆ ಶರಣು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿ.ಎಸ್.ವೈ ಪುತ್ರಿ ಪದ್ಮಾವತಿ ಪುತ್ರಿ ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ತನ್ನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.
ಸೌಂದರ್ಯ ಅವರು ಎಂ. ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದಾರೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ.
ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.