Sunday, July 3, 2022
Home ಸಮಾಚಾರ ರಾಜ್ಯ ವಾರ್ತೆ ಯಡಿಯೂರಪ್ಪ ರಿಸೈನ್ ನಿರ್ಧಾರ!

ಯಡಿಯೂರಪ್ಪ ರಿಸೈನ್ ನಿರ್ಧಾರ!

ಬೆಂಗಳೂರು: ನಿರೀಕ್ಷಿತ ಹಾಗೂ ಅಚ್ಚರಿ ಬೆಳವಣಿಗೆಯೊಂದಿಗೆ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಇಂದು ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಬಿಜೆಪಿ ಎರಡು ವರ್ಷದ ಸಾಧನಾ ಸಮಾವೇಶ ಸಂದರ್ಭದಲ್ಲಿಯೇ ತನ್ನ ನಿರ್ಧಾರ ಪ್ರಕಟಿಸಿದ ಅವರು ಭಾವುಕರಾಗಿ ಕಣ್ಣೀರಿಡುತ್ತಲೇ  ಮಾತನಾಡಿದರು.

ಕರ್ನಾಟಕದಲ್ಲಿ ಬಿಜೆಪಿ ಕಟ್ಟುವಲ್ಲಿ ಶ್ರಮಿಸಿದ್ದ ಯಡಿಯೂರಪ್ಪ 4 ಬಾರಿ ಮುಖ್ಯಮಂತ್ರಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರನ್ನು ಮುಖ್ಯಮಂತ್ರಿ ಗಾದಿಯಲ್ಲಿ ಕೂರಿಸಿ ಜಾತಿ ಸಮೀಕರಣ ಸಮತೋಲನಕ್ಕಾಗಿ 5 ಮಂದಿ ಉಪಮುಖ್ಯಮಂತ್ರಿಗಳನ್ನು ನೇಮಿಸುವ ಯೋಚನೆ ಬಿಜೆಪಿ ಹೈಕಮಾಂಡ್ ಮಾಡಿದೆ ಎಂದು ತಿಳಿದುಬಂದಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!