Tuesday, May 17, 2022
Home ಸಮಾಚಾರ ಅಪರಾಧ ಕೃಷ್ಣಮಠದಲ್ಲಿ ಯಾತ್ರಾರ್ಥಿಯ ನಗ ಕಳವು

ಕೃಷ್ಣಮಠದಲ್ಲಿ ಯಾತ್ರಾರ್ಥಿಯ ನಗ ಕಳವು

ಸುದ್ದಿಕಿರಣ ವರದಿ
ಶನಿವಾರ, ಮೇ 14

ಕೃಷ್ಣಮಠದಲ್ಲಿ ಯಾತ್ರಾರ್ಥಿಯ ನಗ ಕಳವು
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಯಾತ್ರಾರ್ಥಿಯಾಗಿ ಆಗಮಿಸಿದ್ದ ಭಕ್ತರೋರ್ವರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಬೆಂಗಳೂರಿನ ಅತ್ತಿಬೆಲೆ ನಿವಾಸಿ ಷಣ್ಮುಗಂ ಕುಟುಂಬ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ನಂತರ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ವೀಕ್ಷಿಸುತ್ತಿದ್ದರು.

ಈ ವೇಳೆ ದೇವರ ಆರತಿ ಪಡೆಯುವಾಗ ಕಳ್ಳರು ಷಣ್ಮುಗಂ ಅವರ ಹೆಂಡತಿಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣದ ಬಾಕ್ಸ್‌ ನ್ನು ಕಳವು ಮಾಡಿದ್ದಾರೆ.

ಬಾಕ್ಸ್‌ ನಲ್ಲಿ 58 ಗ್ರಾಂ ತೂಕದ ಬಳೆಗಳು, 2.16 ಗ್ರಾಂ ತೂಕದ ಕಿವಿಯೋಲೆ, 2.13 ಗ್ರಾಂ ತೂಕದ ಮಗುವಿನ ಚಿಕ್ಕ ಬಳೆ, 1.20 ಗ್ರಾಂ ತೂಕದ ಪೆಂಡೆಂಟ್‌ ಇರುವ ಚಿನ್ನದ ಸರ, 1.48 ಗ್ರಾಂ ತೂಕದ ದೊಡ್ಡ ಚಿನ್ನದ ಸರ 1 ಹೀಗೆ ಒಟ್ಟು 155 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ. ಒಟ್ಟು ಅಂದಾಜು 6.30 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಉಡುಪಿ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!