Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಯೋಗದಿಂದ ದೇಶದ ಸಂಸ್ಕೃತಿಯ ಬೆಳವಣಿಗೆ

ಯೋಗದಿಂದ ದೇಶದ ಸಂಸ್ಕೃತಿಯ ಬೆಳವಣಿಗೆ

ಉಡುಪಿ: ಯೋಗಾಸನ ನಮ್ಮ ದೇಶದ ಪುರಾತನ ಸಂಸ್ಕೃತಿಯ ವಿಶೇಷ ಭಾಗವಾಗಿದ್ದು, ಇಂದು ವಿಶ್ವದಲ್ಲಿಯೇ ಇದಕ್ಕೆ ವಿಶೇಷ ಮಾನ್ಯತೆ ಇದೆ. ವಿಶ್ವದಲ್ಲಿ ಯೋಗಕ್ಕೆ ವಿಶೇಷ ಮಾನ್ಯತೆ ನೀಡುವಲ್ಲಿ ಪ್ರಧಾನಿ ಮೋದಿ ಪಾತ್ರ ಮಹತ್ವಪೂರ್ಣ. ಯೋಗವನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡ ಪ್ರತಿಯೊಬ್ಬ ಪ್ರಜೆಯೂ ತನ್ನ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದಲ್ಲದೆ ದೇಶದ ಸಂಸ್ಕೃತಿಯನ್ನು ಕಾಪಾಡಿ ಬೆಳೆಸಲು ಸಹಯೋಗ ನೀಡುತ್ತಾನೆ. ಇದನ್ನು ಮನಗೊಂಡ ಜಗತ್ತಿನ ನೂರಕ್ಕಿಂತಲೂ ಅಧಿಕ ದೇಶಗಳು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಮಣಿಪಾಲದ ಹೋಟೆಲ್ ಕಂಟ್ರಿ ಇನ್ ನಲ್ಲಿ ಬಿಜೆಪಿ ಉಡುಪಿ ನಗರ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಅರ್ಹ ಯೋಗ ವಿಜ್ಞಾನ ಕೇಂದ್ರ ಸ್ಥಾಪಕಿ ಪ್ರಕ್ರೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವೈದ್ಯೆ ಡಾ. ಸ್ಪೂತರ್ಿ ಎ. ಶೆಟ್ಟಿ ಅವರು ಯೋಗ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನೀಡಿದರು. ಬಳಿಕ ಅವರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳೆಕಾಯಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಮೊದಲಾದವರಿದ್ದರು.

ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಮಣಿಪಾಲ ಮತ್ತು ದಿನೇಶ್ ಅಮೀನ್ ಸಂಯೋಜಿಸಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!