Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು

ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು

ಉಡುಪಿ: ಛತ್ತೀಸ್ ಘಡ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಸೋಮವಾರ ಬಿಜೆಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಅಜ್ಜರಕಾಡು ಸೈನಿಕರ ಹುತಾತ್ಮ ವೇದಿಕೆಯಲ್ಲಿ ಅಂತಿಮ ನಮನ ಸಲ್ಲಿಸಲಾಯಿತು.

ನಕ್ಸಲ್ ಪಿಡುಗನ್ನು ಬೇರು ಸಹಿತ ಕಿತ್ತೊಗೆಯುವ ಕಾಲ ಸನ್ನಿಹಿತವಾಗಿದೆ. ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರ ತ್ಯಾಗ, ಬಲಿದಾನ ನಿರರ್ಥಕವಾಗದು. ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ, ನಕ್ಸಲ್ ಚಟುವಟಿಕೆ ಹತ್ತಿಕ್ಕಲು ಕಠಿಣ ಕ್ರಮ ಜರುಗಿಸುವ ಮೂಲಕ ಸೈನಿಕರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಸಂಕಲ್ಪ ಮಾಡಿದ್ದಾರೆ. ಇಡೀ ದೇಶ ಇಂದು ಹುತಾತ್ಮ ಸೈನಿಕರ ಕುಟುಂಬದ ಜೊತೆಗಿದೆ. ಕೇಂದ್ರ ಸರ್ಕಾರದ ನಿರ್ದಿಷ್ಟ ಕಠಿಣ ಕ್ರಮಗಳಿಂದ ನಕ್ಸಲ್ ವಾದ ದೇಶದಿಂದ ಮುಕ್ತವಾಗುವ ಭರವಸೆ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಮತ್ತು ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಮತ್ತು ವಿನೋದ್ ರಾಜ್ ಕುಂದಾಪುರ, ಉಪಾಧ್ಯಕ್ಷರಾದ ಅಕ್ಷಿತ್ ಶೆಟ್ಟಿ ಹೆರ್ಗ, ಸುಮಿತ್ ಮಡಿವಾಳ ಮತ್ತು ವಿಜೇತ್, ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ ಮತ್ತು ಸತೀಶ್ ಪೂಜಾರಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಉಪಾಧ್ಯಕ್ಷ ಪ್ರಜೀತ್ ಆಚಾರ್ಯ, ಕಾರ್ಯದರ್ಶಿಗಳಾದ ಶರತ್, ಶ್ರೀವತ್ಸ ಮತ್ತು ಸಂದೇಶ್ ಪ್ರಭು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿ’ಸೋಜ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೂರಜ್ ಪೂಜಾರಿ ಮೊದಲಾದವರಿದ್ದರು.

ಅಗಲಿದ ಯೋಧರ ಗೌರವಾರ್ಥ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿಸಿ, ಮೌನ ಪ್ರಾರ್ಥನೆ ಸಲ್ಲಿಸಲಾಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!