ರಾಜಕೀಯಕ್ಕೆ ವಿದಾಯ ಘೋಷಣೆ
(ಸುದ್ದಿಕಿರಣ ವರದಿ)
ಮೈಸೂರು: ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ.
ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
ಅವರ 75ನೇ ಹುಟ್ಟುಹಬ್ಬದ ದಿನವಾದ ಇಂದು ಈ ಮಹತ್ತರ ಘೋಷಣೆ ಮಾಡಿದ್ದಾರೆ.
ಕೇಂದ್ರ ಸಚಿವರಾಗಿ, ರಾಜ್ಯ ಸಚಿವ ಸಂಪುಟದಲ್ಲೂ ಸಚಿವರಾಗಿ 14 ಚುನಾವಣೆ ಎದುರಿಸಿದ್ದ ಹಿರಿಯ ದಲಿತ ಸಮುದಾಯದ ಮುಖಂಡ ಶ್ರೀನಿವಾಸ ಪ್ರಸಾದ್, ಆತ್ಮತೃಪ್ತಿಯಿಂದ ರಾಜಕೀಯಕ್ಕೆ ವಿದಾಯ ಹೇಳುತ್ತಿರುವುದಾಗಿ ಘೋಷಿಸಿದ್ದಾರೆ.