Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಜೀವ್ ಪುಣ್ಯತಿಥಿ ಆಚರಣೆ

ರಾಜೀವ್ ಪುಣ್ಯತಿಥಿ ಆಚರಣೆ

ಉಡುಪಿ: ಮಾಜಿ ಪ್ರಧಾನಿ ರಾಜೀವ ಗಾಂಧಿ ಪುಣ್ಯತಿಥಿಯನ್ನು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.

ರಾಜೀವ್ ಭಾವಚಿತ್ರಕ್ಕೆ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣಕ್ಕೆ ಒತ್ತುಕೊಟ್ಟು ತಳಮಟ್ಟದ ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಅಧಿಕಾರ ಸಿಗುವಂತೆ ಮಾಡಿದರು. ಪಕ್ಷದ ವಿದ್ಯಾರ್ಥಿ ಸಂಘಟನೆ (ಎನ್.ಎಸ್.ಯು.ಐ) ಹಾಗೂ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಕಾರ್ಯನಿರ್ವಹಿಸಿದ ತಾನೂ ಸೇರಿದಂತೆ ಹಲವರು ಜನಪ್ರತಿನಿಧಿಗಳಾಗಲು ರಾಜೀವ್ ಗಾಂಧಿಯವರೇ ಕಾರಣ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಹಿತಿ ತಂತ್ರಜ್ಞಾನದ ಯುಗ ಪ್ರಾರಂಭಿಸಿ ಆಧುನಿಕ ಭಾರತಕ್ಕೆ ತನ್ನ ಕೊಡುಗೆ ನೀಡಿದವರು ರಾಜೀವ್ ಗಾಂಧಿ ಎಂದರು. ಸಾಂಕ್ರಾಮಿಕ ರೋಗ ತಡೆಗಟ್ಟಲು ವ್ಯಾಕ್ಸಿನ್ ಸಂಶೋಧನೆಗಾಗಿ ತನ್ನ ಅವಧಿಯಲ್ಲಿ 300 ಕೋ. ರೂ. ನಿಧಿ ಮೀಸಲಿಡುವ ಮೂಲಕ ಜನರ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು ಎಂದು ಸ್ಮರಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ ಸ್ವಾಗತಿಸಿದರು.

ಕೆ.ಪಿ.ಸಿ.ಸಿ. ಸಂಯೋಜಕ ಮುರಳಿ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸೌರಭ್ ಬಲ್ಲಾಳ್, ಜಿಲ್ಲಾ ಸೇವಾದಳ ಅಧ್ಯಕ್ಷ ಕಿಶೋರ್ ಕುಮಾರ್ ಎರ್ಮಾಳ್, ಜಿಲ್ಲಾ ಕಾನೂನು ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ಜಿಲ್ಲಾ ಸೋಶಿಯಲ್ ಮೀಡಿಯಾ ಸೆಲ್ ಅಧ್ಯಕ್ಷ ರೋಶನ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಅಣ್ಣಯ್ಯ ಶೇರಿಗಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಉದ್ಯಾವರ ನಾಗೇಶ್ ಕುಮಾರ್, ನಗರಸಭೆ ವಿರೋಧ ಪಕ್ಷ ನಾಯಕ ರಮೇಶ್ ಕಾಂಚನ್, ಸದಾಶಿವ ಅಮೀನ್ ಕಟ್ಟೆಗುಡ್ಡೆ, ನಾರಾಯಣ ಕುಂದರ್, ಜಯಶ್ರೀ ಶೇಟ್, ಗಿರೀಶ್ ಕುಮಾರ್ ಮೊದಲಾದವರಿದ್ದರು.

ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!