Wednesday, August 10, 2022
Home ಸಮಾಚಾರ ಅಪರಾಧ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

ಬೆಂಗಳೂರು, ಡಿ. 23 (ಸುದ್ದಿಕಿರಣ ವರದಿ): ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.

2016ರ ಜು. 28ರಂದು ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಉಡುಪಿ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿಕೊಂಡು ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ರಾಜೇಶ್ವರಿ ಪ್ರಿಯತಮ ನಿರಂಜನ ಭಟ್ ಜೊತೆ ಸೇರಿ ಹೋಮ ಕುಂಡದಲ್ಲಿ ಸುಟ್ಟುಹಾಕಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಕಳೆದ ಜೂನ್ ತಿಂಗಳಲ್ಲಿ ಉಡುಪಿ ನ್ಯಾಯಾಲಯ ಕೊಲೆ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಪ್ರಿಯತಮ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು.

ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!