ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 22
ರಾಷ್ಟ್ರಪತಿಗೆ ಸಿಎಂ ಗೌರವ
ನವದೆಹಲಿ: ಈಚೆಗೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಜಯ ಗಳಿಸಿರುವ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ನೂತನ ರಾಷ್ಟ್ರಪತಿಯಾಗಿ ಚುನಾಯಿತರಾಗಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಮುರ್ಮು ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಹಾಗೂ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿದರು.
ಸ್ವಾಮಿ ವಿವೇಕಾನಂದರ ಆಂಗ್ಲ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು