Saturday, August 13, 2022
Home ಸಮಾಚಾರ ಅಪರಾಧ ರೆಸ್ಟೋರೆಂಟ್ ಅಗ್ನಿಗಾಹುತಿ

ರೆಸ್ಟೋರೆಂಟ್ ಅಗ್ನಿಗಾಹುತಿ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ‌‌ 15

ರೆಸ್ಟೋರೆಂಟ್ ಅಗ್ನಿಗಾಹುತಿ
ಮಣಿಪಾಲ: ಇಲ್ಲಿನ ವಸತಿ ಗೃಹವೊಂದರ ಫ್ಯಾಮಿಲಿ ರೆಸ್ಟೋರೆಂಟ್ ಗೆ ಅಗ್ನಿಸ್ಪರ್ಷವಾಗಿದ್ದು, ಸಂಪೂರ್ಣ ಸುಟ್ಟುಹೋಗಿದೆ.

ಶುಕ್ರವಾರ ಬೆಳಗ್ಗಿನ ಜಾವದಲ್ಲಿ ಘಟನೆ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯ ಕೆನ್ನಾಲಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್‌ ನ್ನು ವ್ಯಾಪಿಸಿದ್ದು ಅಪಾರ ನಷ್ಟ ಸಂಭವಿಸಿದೆ.

ಅಗ್ನಿಶಾಮಕ ದಳದವರು ನಿರಂತರ ಕಾರ್ಯಚರಣೆಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.

ರೆಸ್ಟೋರೆಂಟ್‌ನ ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳೂ ಬೆಂಕಿಗೆ ಆಹುತಿಯಾಗಿವೆ.

ಮಣಿಪಾಲ ಠಾಣೆಯಲ್ಲಿ ಕೇಸು ದಾಖಲಾಗಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!