ಮಂಗಳೂರು: ಉದ್ಯೋಗ, ಶಿಕ್ಷಣ ಇತ್ಯಾದಿಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯುತಿದ್ದು ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಉದ್ಯೋಗ, ಶಿಕ್ಷಣ ಇತ್ಯಾದಿಗಳಿಗಾಗಿ ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ವಾರಾಂತ್ಯದ ದಿನಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.
ಜಿಲ್ಲೆಯ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಸರಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಸಹಕಾರದೊಂದಿಗೆ ಅಶಕ್ತರಿಗಾಗಿ ಸಂಚಾರಿ ವಾಹನ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯನಿರ್ವಹಿಸುತಿದ್ದು ಜಿಲ್ಲೆಯ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ನಾಮನಿರ್ದೇಶಿತ ಸದಸ್ಯ ಭಾಸ್ಕರಚಂದ್ರ ಶೆಟ್ಟಿ, ರೆಡ್ ಕ್ರಾಸ್ ಚೇರ್ ಮೆನ್ ಡಾ. ಶಾಂತಾರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮ, ರೋಟರಿ ಪ್ರಮುಖರಾದ ಯತೀಶ್ ಬೈಕಂಪಾಡಿ, ಆರೋಗ್ಯ ಇಲಾಖೆ ಅಧಿಕಾರಿಗಳು ಮೊದಲಾದವರಿದ್ದರು