Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ವಡ್ಡರ್ಸೆ ಪ್ರಶಸ್ತಿ ಪ್ರದಾನ

ವಡ್ಡರ್ಸೆ ಪ್ರಶಸ್ತಿ ಪ್ರದಾನ

ವಡ್ಡರ್ಸೆ ಪ್ರಶಸ್ತಿ ಪ್ರದಾನ

ಬ್ರಹ್ಮಾವರ, ಡಿ. 26 (ಸುದ್ದಿಕಿರಣ ವರದಿ): ಹಿರಿಯ ಪತ್ರಕರ್ತ ವಡ್ಸರ್ಸೆ ರಘುರಾಮ ಶೆಟ್ಟಿ ಹೆಸರಿನ ಪತ್ರಿಕೋದ್ಯಮ ಪ್ರಶಸ್ತಿಯನ್ನು ಭಾನುವಾರ ಹಿರಿಯ ಪತ್ರಕರ್ತ ಯು. ಎಸ್. ಶೆಣೈ ಅವರಿಗೆ ಪ್ರದಾನ ಮಾಡಲಾಯಿತು.

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ್ರಶಸ್ತಿಯನ್ನು ನಿವೃತ್ತ ಲೋಕಾಯುಕ್ತ ನ್ಯಾ| ಎನ್. ಸಂತೋಷ ಹೆಗ್ಡೆ ಪ್ರದಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಯಮಿ ಆನಂದ ಸಿ. ಕುಂದರ್ ಉದ್ಘಾಟಿಸಿದರು.

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯಕ್ರಮ ಸಂಚಾಲಕ ವಸಂತ ಗಿಳಿಯಾರ್, ಸಂಘದ ಕಾರ್ಯದರ್ಶಿ ರಾಜೇಶ್ ಅಚ್ಲಾಡಿ, ಕೋಶಾಧಿಕಾರಿ ಮೋಹನ್ ಉಡುಪ, ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಮತ್ತು ಸಂಘದ ಸದಸ್ಯರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!