Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ವನಮಹೋತ್ಸವಕ್ಕೆ ಚಾಲನೆ

ವನಮಹೋತ್ಸವಕ್ಕೆ ಚಾಲನೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
*****************************

(ಸುದ್ದಿಕಿರಣ ವರದಿ)

ಉಡುಪಿ, ಜು. 10: ಅಲೆವೂರು ಪ್ರಗತಿ ನಗರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ಕಾಳಜಿ ನಿಟ್ಟಿನಲ್ಲಿ ದೃಷ್ಟಿಯಲ್ಲಿ ಅಲ್ಲಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಹಣ್ಣು ಮತ್ತು ಔಷಧೀಯ ಸಸ್ಯಗಳನ್ನು ನೆಡಲಾಯಿತು.

ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗಿಡಗಳ ಪ್ರಾಯೋಜಕ, ಜಯಂಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ ಹೇರೂರು, ವಿಶ್ವ ಸಂಸ್ಕೃತಿ ಪ್ರತಿಷ್ಠಾನ ಸಂಚಾಲಕ ರವಿರಾಜ್ ಎಚ್. ಪಿ., ಬ್ರಹ್ಮಾವರ ಸುವರ್ಣ ಎಂಟರ್ ಪ್ರೈಸಸ್ ಮುಖ್ಯಸ್ಥೆ ಸುನೀತಾ ಮಧುಸೂದನ್, ಸ್ವಚ್ಛ ಭಾರತ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!