ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15
ಪ್ರಾಕೃತಿಕ ವಿಕೋಪ ಮಾಹಿತಿಗೆ ವಾಟ್ಸಾಪ್ ಸಂಖ್ಯೆ
ಉಡುಪಿ: ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಇತ್ಯಾದಿ ಯಾವುದೇ ಸಮಸ್ಯೆ ಕುರಿತ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ದೂರವಾಣಿ ಸಂಖ್ಯೆಯೊಂದಿಗೆ ವಾಟ್ಸಾಪ್ ಸಂಖ್ಯೆ 9880831516 ಆರಂಭಗೊಳಿಸಿದೆ.
ಅದನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಮಾನ್ಸೂನ್ ಸಂದರ್ಭದ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಿನದ 24 ಗಂಟೆ ಕಾಲ ಕಾರ್ಯಾಚರಿಸುವ ಕಂಟ್ರೋಲ್ ರೂಮ್ ಹಾಗೂ ಟೋಲ್ ಫ್ರೀ ಸಂಖ್ಯೆ 1077 ಹಾಗೂ ದೂರವಾಣಿ 0820-2574802 ಕೂಡಾ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.