ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 12
ಅತಿವೃಷ್ಟಿ: ವಿಶೇಷ ಅನುದಾನಕ್ಕೆ ಮನವಿ
ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿದ ಪರಿಣಾಮ ಗಾಳಿ ಮಳೆಗೆ ಹಲವು ಮನೆಗಳು ಹಾನಿಗೊಂಡಿದ್ದು, ಕೃಷಿ ಭೂಮಿ ಜಲಾವೃತಗೊಂಡಿವೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ನೆರೆಪೀಡಿತ ಜಿಲ್ಲೆ ಎಂದು ಘೋಷಿಸಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎ. ಗಪೂರ್, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೊ, ವಕ್ತಾರ ಭಾಸ್ಕರ ರಾವ್ ಕಿದಿಯೂರು, ಪಕ್ಷ ಪ್ರಮುಖರಾದ ಗಣೇಶ್ ಕೋಟ್ಯಾನ್, ಅಶೋಕ್ ನಾಯರಿ, ಸುಧೀರ್ ಪಡುಬಿದ್ರೆ ಮೊದಲಾದವರಿದ್ದರು.