Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ವೃಕ್ಷಾರೋಪಣಕ್ಕೆ ಚಾಲನೆ

ವೃಕ್ಷಾರೋಪಣಕ್ಕೆ ಚಾಲನೆ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
********************************

(ಸುದ್ದಿಕಿರಣ ವರದಿ)

ಮಂಗಳೂರು, ಜು. 5: ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮರಣಾರ್ಥ ಹಮ್ಮಿಕೊಂಡಿರುವ ವೃಕ್ಷಾರೋಪಣ ಅಭಿಯಾನ ಪ್ರಯುಕ್ತ ದ.ಕ. ಬಿಜೆಪಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಸಹಯೋಗದೊಂದಿಗೆ ಸೋಮವಾರ ಮಣ್ಣಗುಡ್ಡೆಯಲ್ಲಿ ಸಸಿ ನಡೆಸುವ ಮೂಲಕ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಬೆಳವಣಿಗೆಗೆ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಕೊಡುಗೆ ಅಪಾರ. ರಾಷ್ಟ್ರೀಯ ವಿಚಾರಧಾರೆಗಳನ್ನು ಯುವ ಮನಸ್ಸುಗಳ ನಡುವೆ ಪೋಣಿಸುತ್ತಾ ಪಕ್ಷವನ್ನು ಈ ಮಟ್ಟಕ್ಕೆ ಬೆಳೆಸುವಲ್ಲಿ ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲ ಸಾಗುತಿದ್ದೇವೆ. ಈ ನಿಟ್ಟಿನಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮರಣಾರ್ಥ ಸಸಿ ನೆಟ್ಟು ಪೋಷಿಸುವ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಉರ್ವ ಕೆನರಾ ಶಾಲೆಯ ಸಮೀಪದ ಖಾಲಿ ಪ್ರದೇಶದಲ್ಲಿ ಪಾರ್ಕ್ ನಿರ್ಮಾಣದ ಯೋಜನೆ ಹಾಕಲಾಗಿದೆ. ಈಗಾಗಲೇ ಆ ಪಾರ್ಕಿಗೆ ನಿವೃತ್ತ ಶಿಕ್ಷಕ ಬೈಕಾಡಿ ಜನಾರ್ದನ ಆಚಾರ್ ಹೆಸರಿಡುವ ಕುರಿತು ಚಿಂತನೆ ನಡೆಯುತ್ತಿದೆ. ಆ ಪಾರ್ಕ್ ನಿರ್ಮಾಣದಿಂದ ಆ ಭಾಗದ ಜನರಿಗೆ ಉಪಯೋಗವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪ್ರಕೃತಿಯ ಉಳಿವಿಗಾಗಿ ಶ್ರಮಿಸುತ್ತಿರುವ ಮತ್ತು ಸಾವಿರಕ್ಕೂ ಮಿಕ್ಕಿ ಗಿಡಮರಗಳನ್ನು ಆರೈಕೆ ಮಾಡುತ್ತಿರುವ ಪರಿಸರಪ್ರೇಮಿಗಳಾದ ಮಾಧವ ಉಳ್ಳಾಲ್ ಹಾಗೂ ದಿನೇಶ್ ಕೊಡಿಯಾಲ್ ಬೈಲ್ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಕಾರ್ಯದರ್ಶಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಪೂಜಾ ಪೈ, ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇವಂತಿ ಶ್ರೀಯಾನ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮತ್ತು ಮನಪಾ ಸದಸ್ಯೆ ಪೂರ್ಣಿಮಾ, ಸ್ಥಳೀಯ ಮನಪಾ ಸದಸ್ಯೆ ಸಂಧ್ಯಾ ಆಚಾರ್, ಉತ್ತರ ಮಹಾ ಶಕ್ತಿಕೇಂದ್ರ ಅಧ್ಯಕ್ಷ ರಮೇಶ್ ಹೆಗ್ಡೆ, ಮಣ್ಣಗುಡ್ಡೆ ವಾರ್ಡಿನ ಪ್ರಮುಖರಾದ ವಸಂತ್ ಶೇಟ್, ಸಂಜಯ್ ಪ್ರಭು, ಮೋಹನ್ ಆಚಾರ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!