Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ವೈದ್ಯಕೀಯ ಅಧೀಕ್ಷಕರಾಗಿ ನೇಮಕ

ವೈದ್ಯಕೀಯ ಅಧೀಕ್ಷಕರಾಗಿ ನೇಮಕ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ನೂತನ ವೈದ್ಯಕೀಯ ಅಧೀಕ್ಷಕರಾಗಿ ಡಾ. ನಾಗರಾಜ ಎಸ್. ಈಚೆಗೆ ಅಧಿಕಾರ ವಹಿಸಿಕೊಂಡರು. ಮಾಜಿ ವೈದ್ಯಕೀಯ ಅಧೀಕ್ಷಕಿ ಹಾಗೂ ಪ್ರಸಕ್ತ ಪ್ರಾಂಶುಪಾಲೆ ಡಾ. ಮಮತಾ ಕೆ. ವಿ. ಅಧಿಕಾರ ಹಸ್ತಾಂತರಿಸಿದರು.

ಡಾ. ನಾಗರಾಜ ಎಸ್., ಎಸ್.ಡಿ.ಎಂ ಆಯುರ್ವೇದ ಕಾಲೇಜು ಕುತ್ಪಾಡಿಯಲ್ಲಿ ಬಿಎ.ಎಂ.ಎಸ್. ಪದವಿ ಪಡೆದು ಸ್ನಾತಕೋತ್ತರ ಹಾಗೂ ಪಿಎಚ್.ಡಿ. ಪದವಿಗಳನ್ನು ಗುಜರಾತ್ ಆಯುರ್ವೇದ ವಿ.ವಿ.ಯಲ್ಲಿ ಪಡೆದಿದ್ದಾರೆ.

ರೋಗನಿಧಾನ ವಿಭಾಗ ಮುಖ್ಯಸ್ಥ ಹಾಗೂ ಸ್ನಾತಕೋತ್ತರ ಮತ್ತು ಪಿಎಚ್.ಡಿ ಅಧ್ಯಯನ ಕೇಂದ್ರದ ಸಹಾಯಕ ಡೀನ್ ಆಗಿರುವ ಅವರು, ಕಳೆದ 21 ವರ್ಷದಿಂದ ಕಾಲೇಜು ಹಾಗೂ ಆಸ್ಪತ್ರೆಯ ವಿವಿಧ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಎಸ್.ಡಿ.ಎಂ ಎಜ್ಯುಕೇಶನಲ್ ಸೊಸಾಟಿ ಉಜಿರೆ ಅಧ್ಯಕ್ಷ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಭಿನಂದಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!