Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ವ್ಯಸನ ಮುಕ್ತ ದಿನಾಚರಣೆ

ವ್ಯಸನ ಮುಕ್ತ ದಿನಾಚರಣೆ

ಸುದ್ದಿಕಿರಣ ವರದಿ
ಸೋಮವಾರ, ಆಗಸ್ಟ್ 1

ವ್ಯಸನ ಮುಕ್ತ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಸಹಯೋಗದೊಂದಿಗೆ ಡಾ| ಮಹಾಂತೇಶ ಶಿವಯೋಗಿ ಜನ್ಮದಿನ ವ್ಯಸನ ಮುಕ್ತ ದಿನಾಚರಣೆಯನ್ನು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಪುಷ್ಪಾರ್ಚನೆ ಮಾಡಿದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಶಾಸಕರಾದ ರಘುಪತಿ ಭಟ್ ಮತ್ತು ಲಾಲಾಜಿ ಆರ್. ಮೆಂಡನ್, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿ.ಪಂ. ಸಿಇಒ ಪ್ರಸನ್ನ ಎಚ್., ಎಸ್ಪಿ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!