Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಶಿರಾಡಿ ಘಾಟ್ ಭೂಕುಸಿತ

ಶಿರಾಡಿ ಘಾಟ್ ಭೂಕುಸಿತ

ಸುದ್ದಿಕಿರಣ ವರದಿ
ಗುರುವಾರ, ಜುಲೈ 14

ಶಿರಾಡಿ ಘಾಟ್ ಭೂಕುಸಿತ
ಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವುಂಟಾಗಿದ್ದು, ಶಿರಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ.

ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಭಾರಿ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ.

ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಏಕಮುಖವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಲಹೆಯಂತೆ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!