Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಕನ್ನಡ ಭಾಷಾ ವಿಧೇಯಕ ಶೀಘ್ರ ಸಲ್ಲಿಕೆ

ಕನ್ನಡ ಭಾಷಾ ವಿಧೇಯಕ ಶೀಘ್ರ ಸಲ್ಲಿಕೆ

ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 14

ಕನ್ನಡ ಭಾಷಾ ವಿಧೇಯಕ ಶೀಘ್ರ ಸಲ್ಲಿಕೆ
ಉಡುಪಿ: ಕನ್ನಡ ಭಾಷೆ ಉಳಿಯಬೇಕು ಮತ್ತು ಬೆಳೆಯಬೇಕು ಎಂಬ ಆಶಯದಿಂದ ಸಮಗ್ರ ಕನ್ನಡ ಭಾಷಾ ವಿಧೇಯಕವನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಟಿ.ಎಸ್. ನಾಗಾಭರಣ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮಸ್ಯೆಯನ್ನು ಮೂಲದಲ್ಲಿ ಗುರುತಿಸಿ, ಅದನ್ನು ಸರಿಪಡಿಸುವ ಉದ್ದೇಶದಿಂದ ಸಮಗ್ರ ಕನ್ನಡ ಭಾಷಾ ವಿಧೇಯಕ ಸಿದ್ಧವಾಗುತ್ತಿದ್ದು, ಸರ್ಕಾರ ಜಾರಿಗೊಳಿಸಿದರೆ ಕನ್ನಡ ಭಾಷೆ, ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಅದ್ಭುತ ಅಸ್ತ್ರ ಲಭಿಸಿದಂತಾಗುತ್ತದೆ ಎಂದರು.

ಸರೋಜಿನಿ ಮಹಿಷಿ ವರದಿಗೆ ಕಾನೂನಿನ ಚೌಕಟ್ಟಿಲ್ಲದ ಪರಿಣಾಮ ಅನುಷ್ಠಾನ ಸಾಧ್ಯವಾಗಿಲ್ಲ. ಯಾವುದೇ ವರದಿಗಳಿಗೆ ಕಾನೂನು ಹಾಗೂ ವಿಧೇಯಕದ ಚೌಕಟ್ಟು ಇರಬೇಕು. ಅದಿಲ್ಲದಿದ್ದರೆ ನಿಯಮಗಳ ಪಾಲನೆ ಸಾಧ್ಯವಿಲ್ಲ ಎಂದು ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!