ಉಡುಪಿ: ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ್ದ ಡಿ. ಕೆ. ಶಿವಕುಮಾರ್ ಭಾನುವಾರ ಇಲ್ಲಿನ ಶ್ರೀಕೃಷ್ಣ ಮಠ, ಜಾಮಿಯಾ ಮಸೀದಿ ಮತ್ತು ಶೋಕಮಾತಾ ಇಗರ್ಜಿಗೆ ಭೇಟಿ ನೀಡಿದರು.
ಮೊದಲಿಗೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ
ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು
ಅಭಯಚಂದ್ರ, ಮಾಜಿ ಶಾಸಕ ಯು. ಆರ್. ಸಭಾಪತಿ, ಪಕ್ಷದ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರಿದ್ದರು.
ಬಳಿಕ ಚರ್ಚು, ಮಸೀದಿಗಳಿಗೂ ಭೇಟಿ ನೀಡಿದರು
ಶ್ರೀಕೃಷ್ಣ ಮಠ, ಚರ್ಚ್, ಮಸೀದಿಗೆ ಭೇಟಿ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...