Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಶ್ರೀರಾಮಸೇನೆಗೆ ರಾಜೀನಾಮೆ

ಶ್ರೀರಾಮಸೇನೆಗೆ ರಾಜೀನಾಮೆ

ಶ್ರೀರಾಮಸೇನೆಗೆ ರಾಜೀನಾಮೆ

(ಸುದ್ದಿಕಿರಣ ವರದಿ)
ಉಡುಪಿ: ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಸಂಘಟನೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಶ್ರೀರಾಮ ಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷರಾಗಿದ್ದ ಜಯರಾಂ, ಬಳಿಕ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಸಂಘಟನೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸಲು ಕಾರಣರಾಗಿದ್ದರು.

ಹಿಂದುತ್ವ ಮತ್ತು ಸಿದ್ಧಾಂತದಲ್ಲಿ ರಾಜೀ ಮಾಡಿಕೊಳ್ಳದ ಅಂಬೆಕಲ್ಲು, ತನ್ನ ಮುಂದಿನ ನಡೆಯನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!