Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಸಂತ್ರಸ್ತರ ಮನೆಗೆ ಭೇಟಿ

ಸಂತ್ರಸ್ತರ ಮನೆಗೆ ಭೇಟಿ

ಉಡುಪಿ: ವಿದ್ಯುತ್ ತಂತಿ ತಗುಲಿ ಈಚೆಗೆ ಮೃತರಾದ ಕಾಪು ತಾಲೂಕು ಉಳ್ಳೂರು ನಿವಾಡಿ ರಮೇಶ ಪೂಜಾರಿ ಮನೆಗೆ ಈಚೆಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಬಿಜೆಪಿ ಮಂಗಳೂರು ವಿಭಾಗ ಉಸ್ತುವಾರಿ ಕೆ. ಉದಯಕುಮಾರ್ ಶೆಟ್ಟಿ ಭೇಟಿ ನೀಡಿ, ಸಾಂತ್ವನ ಹೇಳಿದರು.

ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಜೊತೆಗೆ ಮೂವರು ಮಕ್ಕಳಲ್ಲಿ ಓರ್ವರಿಗೆ ಸರ್ಕಾರಿ ಉದ್ಯೋಗ ದೊರಕಿಸಿಕೊಡಲು ಯತ್ನಿಸುವುದಾಗಿ ಶಾಸಕ ಲಾಲಾಜಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿ. ಪಂ. ಸದಸ್ಯೆ ಶಿಲ್ಪ ಜಿ. ಸುವರ್ಣ, ತಾ. ಪಂ. ಸದಸ್ಯ ಕೇಶವ ಮೊಯ್ಲಿ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉದ್ಯಮಿ ಸುರೇಶ್ ಶೆಟ್ಟಿ, ಎಲ್ಲೂರು ಗ್ರಾ. ಪಂ. ಅಧ್ಯಕ್ಷ ಜಯಂತ್ ಭಟ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!