Thursday, December 2, 2021
Home ಸಮಾಚಾರ ಜಿಲ್ಲಾ ಸುದ್ದಿ ನ. 26-ಡಿ. 6: ಸಂವಿಧಾನ ಗೌರವ ಅಭಿಯಾನ

ನ. 26-ಡಿ. 6: ಸಂವಿಧಾನ ಗೌರವ ಅಭಿಯಾನ

ನ. 26-ಡಿ. 6: ಸಂವಿಧಾನ ಗೌರವ ಅಭಿಯಾನ

ಉಡುಪಿ, ನ. 24 (ಸುದ್ದಿಕಿರಣ ವರದಿ): ಸಂವಿಧಾನ ದಿನ ಅಂಗವಾಗಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ನ. 26ರಿಂದ ಡಿ. 6ರ ವರೆಗೆ ಸಂವಿಧಾನ ಗೌರವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನ. 26ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿ.ಪಂ. ನಿಕಟಪೂರ್ವ ಅಧ್ಯಕ್ಷ ದಿನಕರಬಾಬು ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಗೌರವ ಸಮರ್ಪಣೆ ನಡೆಯಲಿದೆ. 5 ಮಂಡಲದಿಂದ ದಲಿತ ಸಮುದಾಯಕ್ಕೆ ಸೇರಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಾಗುವುದು. 30 ವರ್ಷದಿಂದ ಕಂಬಳದ ಕೋಣಗಳನ್ನು ಸಾಕುತ್ತಿರುವ ಗುರುವ ಕೊರಂಗ್ರಪಾಡಿ ಹಾಗೂ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಅವರನ್ನು ಗೌರವಿಸಲಾಗುವುದು ಎಂದರು.

ಸಿದ್ದರಾಮಯ್ಯ ಹೇಳಿಕೆಗೆ ಖಂಡನೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂಬ ಹೇಳಿಕೆ ಖಂಡನೀಯ. ರಾಷ್ಟ್ರ ಹಿತ ಚಿಂತನೆ ಹಾಗೂ ರಾಷ್ಟ್ರ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸುತ್ತಿದ್ದಾರೆ.

ಈಚೆಗೆ ನಡೆದ ಪಶ್ಚಿಮ ಬಂಗಾಲ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ 72 ಮಂದಿ ಶಾಸಕರಲ್ಲಿ 40 ಮಂದಿ ದಲಿತರಾಗಿದ್ದಾರೆ.

ಪ್ರಧಾನಿ ಮೋದಿಯವರು ಅಂಬೇಡ್ಕರ್ ಅವರಿಗೆ ಸಂಬಂಧಿಸಿದ 5 ಸ್ಥಳಗಳನ್ನು ತೀರ್ಥಕ್ಷೇತ್ರವಾಗಿ ಅಭಿವೃದ್ಧಿಪಡಿಸಿದ್ದಾರೆ ಎಂದರು.

ಹಂಸಲೇಖ ಹೇಳಿಗೆ ಖಂಡನೆ
ಚಿತ್ರ ಸಾಹಿತಿ ಹಂಸಲೇಖ ಈಚೆಗೆ ಪೇಜಾವರ ಶ್ರೀಗಳ ಬಗ್ಗೆ ನೀಡಿದ ಹೇಳಿಕೆ ಖಂಡನೀಯ. ಶ್ರೀಗಳು ಜೀವಿತಾವಧಿಯಲ್ಲಿ ದಲಿತ ಕೇರಿಗಳಿಗೆ ಭೇಟಿ ನೀಡುವ ಮೂಲಕ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ್ದರು. ಎಲ್ಲಾ ಸಂತರಿಗೆ ಅವರು ಮಾದರಿ ಎಂದರು.

ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಕಳಂಜೆ, ಪ್ರಧಾನ ಕಾರ್ಯದರ್ಶಿ ಸದಾನಂದ ಕಾಪು, ಪದಾಧಿಕಾರಿಗಳಾದ ಚಂದ್ರ ಪಂಚವಟಿ, ಸೋಮನಾಥ ಕಟ್ಟೆಗುಡ್ಡೆ, ರಾಜೇಂದ್ರ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!