Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲಾಧಿಕಾರಿಯಿಂದ ಸಂವಿಧಾನ ಪೀಠಿಕೆ ಬೋಧನೆ

ಜಿಲ್ಲಾಧಿಕಾರಿಯಿಂದ ಸಂವಿಧಾನ ಪೀಠಿಕೆ ಬೋಧನೆ

ಜಿಲ್ಲಾಧಿಕಾರಿಯಿಂದ ಸಂವಿಧಾನ ಪೀಠಿಕೆ ಬೋಧನೆ

ಉಡುಪಿ, ನ. 26 (ಸುದ್ದಿಕಿರಣ ವರದಿ): ಸಂವಿಧಾನ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಪೀಠಿಕೆ ಬೋಧಿಸಿದರು.

ಭಾರತ ದೇಶದ ನಾಗರಿಕರಾದ ನಾವು, ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು, ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆ ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿ ನಮ್ಮ ಸಂವಿಧಾನವನ್ನು ಅಂಗೀಕರಿಸಿದ್ದೇವೆ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. ಅದರಂತೆ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ಭಾರತದ 75ನೇ ಸ್ವಾತಂತ್ರ್ಯೋತ್ಸವದ ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರೂ ನಮ್ಮ ಸಂವಿಧಾನದಲ್ಲಿರುವ ಸಾಂವಿಧಾನಿಕ ಮೌಲ್ಯ ಅರಿಯಬೇಕು ಮತ್ತು ಅದಕ್ಕೆ ಬದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!