Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಜೀವನದಲ್ಲಿ ಸಕಾರಾತ್ಮಕ ಅಂಶ ರೂಢಿಸಿಕೊಳ್ಳಿ

ಜೀವನದಲ್ಲಿ ಸಕಾರಾತ್ಮಕ ಅಂಶ ರೂಢಿಸಿಕೊಳ್ಳಿ

ಸುದ್ದಿಕಿರಣ ವರದಿ
ಗುರುವಾರ, ಜುಲೈ 21

ಜೀವನದಲ್ಲಿ ಸಕಾರಾತ್ಮಕ ಅಂಶ ರೂಢಿಸಿಕೊಳ್ಳಿ
ಉಡುಪಿ: ವಿದ್ಯಾರ್ಥಿಗಳು ಸಕಾರಾತ್ಮಕ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದುಶ್ಚಟಗಳಿಂದ ದೂರವಿದ್ದು ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ದೊಡ್ಡಣಗುಡ್ಡೆ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಆಪ್ತ ಸಮಾಲೋಚಕಿ ಡಾ. ದೀಪಶ್ರೀ ಕಿವಿಮಾತು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ತಾಲೂಕು ಮತ್ತು ಉಡುಪಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ವಲಯ ನೇತೃತ್ವದಲ್ಲಿ ವಿಶ್ವ ಮಾದದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಂಪನ್ಮೂಲವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನವೀನ ಅಮೀನ್ ಶಂಕರಪುರ, ದುಶ್ಚಟ ಮುಕ್ತ ಸಮಾಜ ನಿರ್ಮಾಣದತ್ತ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಿಲ್ಲಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ. ರಾಜ್ ಮೋಹನ್, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಲಭ್ಯವಿರುವ ಸ್ವಾಸ್ಥ್ಯ ಸಂಕಲ್ಪದಂಥ ಉಪಯುಕ್ತ ಮಾಹಿತಿ ಶಿಬಿರದ ಸದುಪಯೋಗ ಪಡೆದುಕೊಂಡು ಮಾದಕ ವಸ್ತುಗಳ ವಿರುದ್ಧ ಸ್ವಯಂ ಜಾಗೃತರಾಗುವ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸಬೇಕು ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಸಮಾಜಮುಖಿ ಸೇವಾ ಕಾರ್ಯಗಳನ್ನು ವಿವರಿಸಿದರು.

ಜನಜಾಗೃತಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯ ಹಾಗೂ ಉಡುಪಿ ವಲಯಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅಧ್ಯಕ್ಷತೆ ವಹಿಸಿದ್ದರು.

ಯೋಜನೆಯ ಪ್ರಾದೇಶಿಕ ಕಚೇರಿ ಆಡಳಿತ ವಿಭಾಗದ ಯೋಜನಾಧಿಕಾರಿ ಪುರಂದರ, ಸ್ವಾಸ್ಥ್ಯ ಸಂಕಲ್ಪದ ಪ್ರಮಾಣ ವಚನ ಬೋಧಿಸಿದರು.

ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಿರುಚಿತ್ರ ಪ್ರದರ್ಶಿಸಲಾಯಿತು.

ಪದವಿ ಪೂರ್ವ ತರಗತಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಸೇವಾ ಪ್ರತಿನಿಧಿಗಳಾದ ಉಷಾ, ಆಶಾ ಮತ್ತು ಶರ್ಮಿಳಾ ಇದ್ದರು.

ಸೇವಾ ಪ್ರತಿನಿಧಿ ಗೀತಾ ಪಾಲನ್ ಸ್ವಾಗತಿಸಿದರು. ಉಡುಪಿ ವಲಯ ಮೇಲ್ವಿಚಾರಕಿ ಪ್ರೇಮಾ ನಿರೂಪಿಸಿ, ತಾಲೂಕು ಕೃಷಿ ಅಧಿಕಾರಿ ರಾಘವೇಂದ್ರ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!