ಸಚಿವದ್ವಯರಿಗೆ ಅಭಿನಂದನೆ
(ಸುದ್ದಿಕಿರಣ ವರದಿ)
ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ. ಸಿ ನಾಗೇಶ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೆಂಗಳೂರಿನ ವಿಕಾಸಸೌಧದಲ್ಲಿ ಅಭಿನಂದಿಸಲಾಯಿತು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪಕ್ಷದ ಹಿರಿಯರಾದ ಕಾರ್ಕಳ ಬೋಳ ಪ್ರಭಾಕರ ಕಾಮತ್ ಮತ್ತು ಜಿಲ್ಲಾ ಬಿಜೆಪಿ ವಕ್ತಾರ ಗುರುಪ್ರಸಾದ್ ಶೆಟ್ಟಿ ಇದ್ದರು.