ಸುದ್ದಿಕಿರಣ ವರದಿ
ಶುಕ್ರವಾರ, ಜ. 7, 2022
ಸಚಿವ ಅಶೋಕ್ ಗೆ ಕೋವಿಡ್ ದೃಢ
ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರಿಗೆ ಸೋಂಕಿನ ಸೌಮ್ಯ ಲಕ್ಷಣ ಇರುವುದಾಗಿ ವರದಿಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.