ಸುದ್ದಿಕಿರಣ ವರದಿ
ಶುಕ್ರವಾರ, ಜನವರಿ 28
ದ.ಕ. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಗೆ ಅದ್ದೂರಿ ಸ್ವಾಗತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಶುಕ್ರವಾರ ಇಲ್ಲಿಗಾಗಮಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು.
ಬಳಿಕ ಸಚಿವರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ರಥಬೀದಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರಿದ್ದರು