Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಸಮವಸ್ತ್ರ ಕಡ್ಡಾಯ ಮಾಡಿ ಎನ್ನಲು ರಘುಪತಿ ಭಟ್ ಯಾರು?: ಸಿದ್ದರಾಮಯ್ಯ ಪ್ರಶ್ನೆ

ಸಮವಸ್ತ್ರ ಕಡ್ಡಾಯ ಮಾಡಿ ಎನ್ನಲು ರಘುಪತಿ ಭಟ್ ಯಾರು?: ಸಿದ್ದರಾಮಯ್ಯ ಪ್ರಶ್ನೆ

ಸುದ್ದಿಕಿರಣ ವರದಿ
ಶುಕ್ರವಾರ, ಫೆಬ್ರವರಿ 4

ಸಮವಸ್ತ್ರ ಕಡ್ಡಾಯ ಮಾಡಿ ಎನ್ನಲು ರಘುಪತಿ ಭಟ್ ಯಾರು?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಎನ್ನಲು ರಘುಪತಿ ಭಟ್ ಯಾರು ಎಂದು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ತಲೆದೋರಿರುವ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ಸರ್ಕಾರ ಎಲ್ಲೂ ಹೇಳಿಲ್ಲ.

ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕುಂದಾಪುರ ಕಾಲೇಜೊಂದರ ಪ್ರಾಂಶುಪಾಲರು ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಯುವತಿಯರು ಮತ್ತು ಮಹಿಳೆಯರು ಹಿಜಾಬ್ ಧರಿಸುವುದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ, ಅದರಿಂದ ಇತರರಿಗೆ ಏನು ತೊಂದರೆ? ಮುಸ್ಲಿಂ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತಗೊಳಿಸುವ ಕುಟಿಲ ಪ್ರಯತ್ನವ ಇದು ಎಂದವರು ಆರೋಪಿಸಿದರು.

ಕಾಲೇಜಿನ ಪ್ರಾಂಶುಪಾಲರು ಗೇಟ್ ನಲ್ಲಿ ಮಕ್ಕಳನ್ನು ತಡೆಯುವುದು ಅಮಾನವೀಯ‌. ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಸರ್ಕಾರ ಇಂಥದಕ್ಕೆ ಕುಮ್ಮಕ್ಕು ಕೊಡಬಾರದು. ವಿದ್ಯಾರ್ಥಿನಿಯರನ್ನು ತಡೆದ ಪ್ರಾಂಶುಪಾಲರನ್ನು ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!