Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲಾ ಬಿಜೆಪಿ ಸಂಘಟನಾತ್ಮಕ ಸರಣಿ ಕಾರ್ಯಕ್ರಮ

ಜಿಲ್ಲಾ ಬಿಜೆಪಿ ಸಂಘಟನಾತ್ಮಕ ಸರಣಿ ಕಾರ್ಯಕ್ರಮ

ಉಡುಪಿ: ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸಂಘಟನಾತ್ಮಕ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಅಂತಾರಾಷ್ಟ್ರೀಯ ಯೋಗ ದಿನದಂದು ಜಿಲ್ಲೆ ಮತ್ತು ಎಲ್ಲಾ 6 ಮಂಡಲ ವ್ಯಾಪ್ತಿಯ 25ಕ್ಕೂ ಮಿಕ್ಕಿ ವಿವಿಧ ಕೇಂದ್ರಗಳಲ್ಲಿ ಯೋಗ ಶಿಬಿರ ಆಯೋಜಿಸಲಾಗಿದೆ.

ಜೂ. 23ರಂದು ಡಾ. ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯತಿಥಿ ಮತ್ತು ಜು. 6ರಂದು ಅವರ ಜನ್ಮದಿನ ಅಂಗವಾಗಿ ವಿಚಾರಸಂಕಿರಣ, ಪ್ರತಿ ಬೂತ್ ಮಟ್ಟದಲ್ಲಿ ಸಸಿ ನೆಡುವ ಅಭಿಯಾನ, ಕೆರೆ, ಬಾವಿ ಮತ್ತು ಇತರ ಜಲ ಮೂಲಗಳ ಬಗ್ಗೆ ವಿಶೇಷ ಗಮನಹರಿಸಿ ಕ್ಲೀನ್ ಇಂಡಿಯಾ, ಹೆಲ್ತ್ ಇಂಡಿಯಾ ಘೋಷಣೆಯಡಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ನಡೆಸಲಾಗುವುದು.

ಜೂ. 25ಂದು ತುರ್ತು ಪರಿಸ್ಥಿತಿಯ ಕರಾಳ ದಿನಾಚರಣೆ ಮಾಡಲಾಗುವುದು. ಕಾಂಗ್ರೆಸ್ ಕೈಗೊಂಡ ದಮನಕಾರಿ ನೀತಿ ಮತ್ತು ಪ್ರಜಾಪ್ರಭುತ್ವ ಹತ್ತಿಕ್ಕುವ ನೀತಿ ಖಂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು.

ಜೂ. 27ರಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಎಲ್ಲರೂ ಆಲಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸೇವಾ ಹಿ ಸಂಘಟನ್ ಯೋಜನೆಯಡಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ಹಾಕುವ ಆಂದೋಲನ, ಕೋವಿಡ್ ನಿಯಮ ಪಾಲನೆ ಹಾಗೂ ಸಾಮಾಜಿಕ ನಡವಳಿಕೆ ಬಗ್ಗೆ ಜಾಗೃತಿ, ರಕ್ತದಾನ ಶಿಬಿರ, ಕೊರೊನಾ ವಾರಿಯರ್ ಗಳನ್ನು ಗುರುತಿಸಿ ಗೌರವಿಸುವುದು, ಸಂಕಷ್ಟದಲ್ಲಿರುವವರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ, ವೈದ್ಯಕೀಯ ನೆರವು, ಕೋವಿಡ್ ಸಹಾಯ ಕೇಂದ್ರ ನಿರ್ವಹಣೆ ಇತ್ಯಾದಿ ನಡೆಸಲಾಗುವುದು.

ಸ್ಥಳೀಯ ಆರೋಗ್ಯ ಸ್ವಯಂಸೇವಕರನ್ನು ನೇಮಿಸಿ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಲಸಿಕೆ ನೀಡುವ ಪ್ರಕ್ರಿಯೆ ಮತ್ತು ಆರೋಗ್ಯ ಸಂವರ್ಧನೆ ಅಭಿಯಾನದಲ್ಲಿ ಸಹಕರಿಸುವುದು.

ಜಿಲ್ಲಾ ಮತ್ತು ಮಂಡಲಗಳ ಕಾರ್ಯಕಾರಿಣೆ ಸಭೆ, ಮಂಡಲವಾರು ಇ-ಪ್ರಶಿಕ್ಷಣ ವರ್ಗ ಆಯೋಜಿಸಲಾಗುವುದು ಎಂದು ಕುಯಿಲಾಡಿ ವಿವರಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!