ಉಡುಪಿ: ಈ ತಿಂಗಳ 17ರಂದು ನಡೆಯಲಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಮಹಾಸಮಾರಾಧನೆಯನ್ನು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾಪೀಠದ ವಿದ್ವಾಂಸರು ಮತ್ತು ಸೀಮಿತ ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಿಗಷ್ಟೇ ಕಾರ್ಯಕ್ರಮ ಸೀಮಿತಗೊಳಿಸಲಾಗುವುದು. ಯಾವುದೇ ವಿಶೇಷ ಗಣ್ಯರು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಶ್ರೀಗಳ ಭಕ್ತರು ಮತ್ತು ಅಭಿಮಾನಿಗಳು ತಮ್ಮ ಮನೆಗಳಲ್ಲೇ ಶ್ರೀಗಳ ಸ್ಮರಣೆ ಮಾಡುವಂತೆ ಸಲಹೆ ನೀಡಿದರು.
ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಮೃತ್ತಿಕಾ ವೃಂದಾವನ ನಿರ್ಮಿಸುವ ಯೋಜನೆ ಸದ್ಯಕ್ಕಿಲ್ಲ ಎಂದವರು ಸ್ಪಷ್ಟಪಡಿಸಿದರು
ಸರಳವಾಗಿ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮಾರಾಧನೆ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...