Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಸರ್ಕಾರಿ ಭರವಸೆಗಳ ಸಮಿತಿ ಸಭೆ

ಬೆಂಗಳೂರು: ಸರ್ಕಾರಿ ಭರವಸೆಗಳ ಸಮಿತಿ ಸಭೆ ಗುರುವಾರ ಇಲ್ಲಿನ ಶಾಸಕರ ಭವನ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.

ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೆ. ಎಸ್. ಕೃಷ್ಣಾರೆಡ್ಡಿ, ಮುಖ್ಯ ಯೋಜನಾಧಿಕಾರಿ ಬಿ. ಗುರುಪ್ರಸಾದ್, ಮುಕ್ಯ ಇಂಜಿನಿಯರ್ ಶಿವಯೋಗಿ ಹಿರೇಮಠ, ಕೆ.ಆರ್.ಡಿ.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕ ಪಿ. ಆರ್. ಶಿವಪ್ರಸಾದ್, ರಾಜ್ಯ ಹೆದ್ದಾರಿ ಅಭಿವೃದ್ಧಿ ಇಲಾಖೆ ಮುಖ್ಯ ಇಂಜಿನಿಯರ್ ವೀರಭದ್ರಯ್ಯ ಬಿ. ಆರ್., ಲೋಕೋಪಯೋಗಿ ಇಲಾಖೆ ಶಿವಮೊಗ್ಗ ಮುಖ್ಯ ಇಂಜಿನಿಯರ್ ಬಿ. ಟಿ. ಕಾಂತರಾಜ್ ಮೊದಲಾದ ಅಧಿಕಾರಿಗಳು ಇದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!