Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲಾದ್ಯಂತ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಜಿಲ್ಲಾದ್ಯಂತ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಉಡುಪಿ: ದೇಶದ ಅಖಂಡತೆ ಮತ್ತು ಸಾರ್ವಭೌಮತೆಗಾಗಿ ಬಲಿದಾನಗೈದ ದೇಶಭಕ್ತ, ಜನಸಂಘ ಸಂಸ್ಥಾಪಕ ಡಾ| ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನದ ದಿನವಾದ ಜೂ. 23ರಿಂದ ಅವರ ಜನ್ಮದಿನ ಜು. 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಬಿಜೆಪಿ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಮೂಲಕ ಡಾ| ಮುಖರ್ಜಿಯವರ ತತ್ವಾದರ್ಶ ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಬುಧವಾರ ಡಾ| ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನ ಅಂಗವಾಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಗರದ ಇಂದ್ರಾಳಿ ರೈಲ್ವೆ ನಿಲ್ದಾಣ ಪರಿಸರದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೈಲ್ವೆ ಇಂಜಿನಿಯರ್ ವೆಂಕಟೇಶ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿ’ಸೋಜ, ಬಿಜೆಪಿ ಉಡುಪಿ ನಗರ ಪ್ರಶಿಕ್ಷಣ ವರ್ಗ ಸಂಚಾಲಕ ಲೋಕಯ್ಯ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಜಲಾ ಸತೀಶ್ ಮತ್ತು ಸುಧಾ ಪೈ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್, ಮಾಯಾ ಕಾಮತ್, ದಯಾಶಿನಿ, ಲೈಲಾ ಪ್ರಭಾವತಿ, ರಶ್ಮಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!