ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿದ ಸಹಕಾರ ಮಂತ್ರಾಲಯದ ನೂತನ ಸಹಕಾರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.
ನೂತನ ಸಹಕಾರಿ ಸಚಿವಾಲಯದಿಂದ ಗ್ರಾಮೀಣ ಆರ್ಥಿಕ ವ್ಯವಸ್ಥೆ ಸದೃಢಗೊಳ್ಳಲಿದೆ ಎಂದು ಸಚಿವೆ ಶೋಭಾ ತಿಳಿಸಿದರು.
ತನ್ನಲ್ಲಿ ನಂಬಿಕೆ ಇಟ್ಟು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯನ್ನಾಗಿ ಆಯ್ಕೆ ಮಾಡಿದ ಬಿಜೆಪಿ ರಾಷ್ಟ್ರೀಯ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿ, ದೇಶದ ಕೃಷಿಕ ಬಂಧುಗಳ ಕಲ್ಯಾಣಕ್ಕಾಗಿ ಕೆಲಸ ಮಾಡಲು ಸಹಕಾರ ಹಾಗೂ ಮಾರ್ಗದರ್ಶನ ಬಯಸಿದರು.