ಉಡುಪಿ: ವಿಶ್ವಗುರು ಆಚಾರ್ಯ ಮಧ್ವರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಸ್ಮರಣೆಗಾಗಿ ನಡೆಯುವ ಸಪ್ತೋತ್ಸವ ಸಂದರ್ಭದಲ್ಲಿ ಇಲ್ಲಿನ ಶ್ರೀಕೃಷ್ಣಮಠ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಪರ್ಯಾಯ ಅದಮಾರು ಮಠ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಜಿ.ಪಂ. ಅಧ್ಯಕ್ಷ ದಿನಕರಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಭ್ಯಾಗತರಾಗಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಅಷ್ಟಾವಧಾನಿ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಹಿರಿಯ ವಕೀಲ ಪಿ. ಎನ್. ಗೋಪಾಲಕೃಷ್ಣ ರಾವ್ ಮತ್ತು ಮಂಗಳೂರಿನ ಸಮಾಜಸೇವಕ ಕೆ. ಸಿ. ಪ್ರಭು ಅವರನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.
ಸಂಗೀತ ಕಛೇರಿ
ಬಳಿಕ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಶುಕ್ರವಾರ ಬೆಂಗಳೂರಿನ ಪಂ| ಜಯತೀರ್ಥ ಮೇವುಂಡಿ ಮತ್ತು ಬಳಗದವರಿಂದ ಹಿಂದೂಸ್ಥಾನಿ ಸಂಗೀತ ಕಛೇರಿ ನಡೆಯಿತು.