Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಸಾಲೆತ್ತೂರು ಘಟನೆಗೆ ಖಂಡನೆ

ಸಾಲೆತ್ತೂರು ಘಟನೆಗೆ ಖಂಡನೆ

ಸುದ್ದಿಕಿರಣ ವರದಿ
ಶನಿವಾರ, ಜನವರಿ 8, 2022

ಸಾಲೆತ್ತೂರು ಘಟನೆಗೆ ಖಂಡನೆ
ಉಡುಪಿ: ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ಮುಸ್ಲಿಮರ ಮದುವೆ ಸಮಾರಂಭದಲ್ಲಿ ಮದುಮಗ ಕೊರಗಜ್ಜನ ವೇಷ ಹಾಕಿ ಕುಣಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಲ್ಲದೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವಾಗಿದೆ. ಈ ಕೃತ್ಯ ಧರ್ಮ- ಧರ್ಮಗಳ ನಡುವೆ ವೈರತ್ವ ಉಂಟುಮಾಡುವುದಲ್ಲದೆ ಪರಸ್ಪರ ಸೌಹಾರ್ದತೆಗೆ ಧಕ್ಕೆ ಉಂಟುಮಾಡುತ್ತದೆ ಎಂದು ಕಾಂಗ್ರೆಸ್ ತಿಳಿಸಿದೆ.

ಈ ಕೃತ್ಯ, ಮುಸ್ಲಿಂ ಸಮುದಾಯದ ವಿವಾಹ ಆಚರಣೆಗೇ ವಿರುದ್ಧವಾದ ಹಾಗೂ ಇನ್ನೊಂದು ಸಮುದಾಯದ ಧಾರ್ಮಿಕ ನಂಬಿಕೆಯನ್ನು ಅಪಮಾನ ಮಾಡಿ ತುಳುನಾಡಿನ ದೈವಾರಾಧನೆ ಬಗ್ಗೆ ವಿಕೃತಿ ಮೆರೆದಿರುವ ಕೃತ್ಯವಾಗಿದೆ. ಅದನ್ನು ನಡೆಸಿದವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ಸರ್ಕಾರವನ್ನು ಆಗ್ರಹಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!